Breaking News

ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ : ಮಾಯಾವತಿ

ಬಸ್ತಿ: ‘ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿಯು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿ ಇನ್ನೂ ಪ್ರಸ್ತುತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಯಾವತಿ ಅವರು, ಸತ್ಯವನ್ನು ಒಪ್ಪಿಕೊಳ್ಳುವ ದೊಡ್ಡತನವನ್ನು ಅಮಿತ್ ಶಾ ತೋರಿದ್ದಾರೆ ಎಂದು ಹೇಳಿದ್ದರು. ಬಿಎಸ್‌ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಈ ಎರಡೂ ಹೇಳಿಕೆಗಳ ನಂತರ ಆರೋಪಿಸಿದ್ದವು. ಸಮಾಜವಾದಿ ಪಕ್ಷವು, ‘ಬಿಎಸ್‌ಪಿಯು ಬಿಜೆಪಿಯ ಬಿ ಟೀಂ’ ಎಂದು ಆರೋಪಿಸಿತ್ತು.

ಈ ಆರೋಪಗಳಿಗೆ ಮಾಯಾವತಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷವು ಬಿಜೆಪಿಯ ಬಿ ಟೀಂ ಆಗಿದ್ದೇ ನಿಜವಾದರೆ, ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ಜೊತೆ ಸಮಾಜವಾದಿ ಪಕ್ಷವು ಮೈತ್ರಿ ಮಾಡಿಕೊಂಡಿದ್ದು ಏಕೆ’ ಎಂದು ಅವರು ಪ್ರಶ್ನಿಸಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *