ಬೆಂಗಳೂರು: ಕೊರೋನಾ ಕಾರಣದಿಂದ ಅರ್ಧಕ್ಕೆ ಮೊಟಕುಗೊಳಿಸಿದ್ದ ಮೇಕೆದಾಟು ಪಾದಯಾತ್ರೆ ಫೆ.27ರಂದು ರಾಮನಗರದಿಂದ ಪುನರ್ ಆರಂಭಗೊಳ್ಳುತ್ತಿದ್ದು, ಮಾ.1ರಿಂದ 3ರ ವರೆಗೆ ಮೂರು ದಿನ ಬೆಂಗಳೂರು ನಗರ ಭಾಗದಲ್ಲಿ ಬೃಹತ್ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.28ರ ವೇಳೆಗೆ ಪಾದಯಾತ್ರೆ ಕೆಂಗೇರಿ ತಲುಪಲಿದೆ. ಬಳಿಕ ಬೆಂಗಳೂರಿನಲ್ಲೇ 5 ದಿನ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮಾ.4ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಮೂರು ದಿನಗಳಿಗೆ ಸೀಮಿತಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

