Breaking News

ಉಕ್ರೇನ್‌ʼನಲ್ಲಿ ಸಿಲುಕಿರುವ ರಾಜ್ಯದ ಜನರ ರಕ್ಷಣೆಗೆ ಎಚ್ ಡಿಕೆ ಒತ್ತಾಯ


ಬೆಂಗಳೂರು: ಉಕ್ರೇನ್‌ʼನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್‌ʼಲಿಫ್ಟ್‌ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯಿಸಿದ್ದಾರೆ.

ಅಲ್ಲದೆ, ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy ), ‘ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್‌ ಕರೆತರಬೇಕು’ ಎಂದು ಹೇಳಿದ್ದಾರೆ.

ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ ಜನತಾದಳ ಪಕ್ಷದ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಕನ್ನಡಿಗರು ಉಕ್ರೇನ್‌ʼನಲ್ಲಿ ಜೀವಭಯದಿಂದ ತತ್ತರಿಸಿದ್ದಾರೆ. ಕೂಡಲೇ ಅವರನ್ನು ರಕ್ಷಿಸಿ ಕರೆತರುವ ಕೆಲಸ ಆಗಬೇಕು ಎಂದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *