Breaking News

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ತುಸು ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಮತ್ತು ಪಾಸಿಟಿವಿಟಿ ದರದಲ್ಲಿ ತುಸು ಏರಿಕೆ ದಾಖಲಾಗಿದೆ. ಶುಕ್ರವಾರ 628 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 15 ಮಂದಿ ಮರಣವನ್ನಪ್ಪಿದ್ದಾರೆ.

1,349 ಮಂದಿ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,518ಕ್ಕೆ ಕುಸಿದಿದೆ. ಪಾಸಿಟಿವಿಟಿ ದರ ಶೇ.0.92ಕ್ಕೆ ಏರಿದೆ. ಜ.17ರಂದು 14 ಮಂದಿ ಮರಣವನ್ನಪ್ಪಿದ ಬಳಿಕದ ಒಂದು ದಿನದ ಕನಿಷ್ಠ ಸಾವು ಶುಕ್ರವಾರ ವರದಿಯಾಗಿದೆ.

ಬೆಂಗಳೂರು ನಗರದಲ್ಲಿ 346 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಳಗಾವಿ 30, ಚಿತ್ರದುರ್ಗ 22, ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ತಲಾ 21 ಪ್ರಕರಣ ವರದಿಯಾಗಿದೆ. ಯಾದಗಿರಿ, ಗದಗ ಜಿಲ್ಲೆಯಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ. ಇನ್ನುಳಿದ ಜಿಲ್ಲೆಗಳಲ್ಲಿ ಒಂದಂಕಿ ಪ್ರಕರಣ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 12 ಮಂದಿ, ತುಮಕೂರು, ಧಾರವಾಡ ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಸೋಂಕಿನಿಂದ ಮರಣವನ್ನಪ್ಪಿದ್ದಾರೆ. ಶುಕ್ರವಾರ ರಾಜ್ಯದಲ್ಲಿ 1.05 ಲಕ್ಷ ಮಂದಿ ಕೋವಿಡ್‌ ಲಸಿಕೆ ತೆಗೆದುಕೊಂಡಿದ್ದಾರೆ.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *