Breaking News

ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿ


ಹುಬ್ಬಳ್ಳಿ: ಕಾಂಗ್ರೆಸ್ಸಿನವರು ಮೇಕೆದಾಟು ಡಿಪಿಆರ್ ಮಾಡೋಕೆ ಐದು ವರ್ಷ ತೆಗೆದುಕೊಂಡಿದ್ದರು ಆದರೂ ಕೂಡ ಅದು ಸಾಧ್ಯವಾಗಿಲ್ಲ. ಮೇಕೆದಾಟು ವಿಷಯವಾಗಿ ಕಾಂಗ್ರೆಸ್ ರಾಜಕೀಯವಾಗಿ ಪಾದಯಾತ್ರೆ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಅವರ ಅವಧಿಯಲ್ಲಿ ಡಿಪಿಆರ್ ಮಾಡಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಅವರು ಸಿಎಂ ಆದ ಸಂದರ್ಭದಲ್ಲಿ ಡಿಪಿಆರ್ ಮಾಡಲಾಗಿದೆ ಎಂದರು.

ಇನ್ನೂ ಬಜೆಟ್ ಕುರಿತು ಮಾತನಾಡಿದ ಅವರು, ಬಜೆಟ್ ಇನ್ನೆನೂ ದೂರ ಇಲ್ಲ. ಬಜೆಟ್ ನಲ್ಲಿ ಏನ ಇದೆ ಎನ್ನುವುದು ಹೇಳಲು ಬರುವುದಿಲ್ಲ. ನಾಲ್ಕನೇ ತಾರೀಖಿನವರೆಗೆ ಕಾದು ನೋಡಬೇಕಿದೆ ಎಂದು ಅವರು ಹೇಳಿದರು.

ಎಸ್.ಡಿ.ಪಿ.ಐ ಬ್ಯಾನ್ ಮಾಡುವಂತೆ ಬಿಜೆಪಿಯೇ ಧ್ವನಿ ಎತ್ತಿರುವ ಕುರಿತು ಮಾಧ್ಯಮದ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಘಟನೆಗಳನ್ನು ನಮ್ಮ ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಮತೀಯ ಭಾವನೆಗಳನ್ನು ಕದಡುವಂತ ಕೋಮುವಾದ ಸೃಷ್ಟಿಸುವ ಎಲ್ಲ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆಧಾರಗಳನ್ನು ಸೇರಿಸಿಕೊಂಡು ಮುಂಬರುವ ದಿನಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಉಕ್ರೇನ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ಕರೆತರುವ ಕುರಿತು ಮಾತನಾಡಿದ ಅವರು, ಉಕ್ರೇನ್ ಪಶ್ಚಿಮ ಭಾಗದಲ್ಲಿರುವ ಭಾರತದ ವಿದ್ಯಾರ್ಥಿಗಳನ್ನು ರೋಡ್ ಮೂಲಕ ಕರೆತರುವ ಕುರಿತು ಕೇಂದ್ರ ಸರ್ಕಾರ ಸೂಕ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *