Breaking News

ಮೇಕೆದಾಟು ಪಾದಯಾತ್ರೆ : ಬಿಜೆಪಿಯ ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್


ರಾಮನಗರ: ಕಾವೇರಿ ನೀರು ಬಳಕೆಯ ಹಕ್ಕು ಜನರಿಗೆ ದೊರೆಯುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ನಾಯಕರು ಭಾನುವಾರ ಇಲ್ಲಿ ಆರಂಭಗೊಂಡ ಮೇಕೆದಾಟು ಎರಡನೇ ಹಂತದ ಪಾದಯಾತ್ರೆಯಲ್ಲಿ ಘೋಷಿಸಿದರು. ಬಿಜೆಪಿಯ ‘ಡಬಲ್‌ ಎಂಜಿನ್‌’ ಸರ್ಕಾರದ ವಿರುದ್ಧ ಹರಿಹಾಯ್ದರು.

ಇಲ್ಲಿನ ಟಿ.ಆರ್. ಮಿಲ್‌ ಮೈದಾನದಲ್ಲಿ ಪಾದಯಾತ್ರೆಗೆ ಮರು ಚಾಲನೆ ನೀಡಿದ ಕರ್ನಾಟಕ ಕಾಂಗ್ರೆಸ್‌ನ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ‘ಕಾವೇರಿ ನೀರಿನ ಪ್ರತಿ ಹನಿ ಮೇಲೂ ಈ ಪ್ರದೇಶದ ಜನರಿಗೆ ಹಕ್ಕು ಇದೆ. ಇದು ಚಲಾವಣೆ ಆಗಬೇಕಾದರೆ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಆಗಬೇಕು. ಆದರೆ ಬೆಂಗಳೂರಿನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವೇ ಇದಕ್ಕೆ ಅಡ್ಡಿಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‘ಜನರು ತಮ್ಮ ನೀರಿನ ಹಕ್ಕಿಗಾಗಿ ನಡೆಸಿರುವ ಈ ಹೋರಾಟದಲ್ಲಿ ಯಶಸ್ಸು ಸಿಗುವವರೆಗೂ ಕಾಂಗ್ರೆಸ್ ಅವರ ಜೊತೆ ನಿಲ್ಲಲಿದೆ. ಪಾದಯಾತ್ರೆ ಮುಗಿದರೂ ಹೋರಾಟ ಮುಗಿಯದು’ ಎಂದು ಹೇಳಿದರು.

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *