Breaking News

ಪ್ರತಿಯೊಬ್ಬರಿಗೆ ಮಾತೃ ಭಾಷೆಯನ್ನು ಹೆಮ್ಮೆಯಿಂದ ಬಳಸಬೇಕು: ಮೋದಿ


ನವದೆಹಲಿ: ಪ್ರತಿಯೊಬ್ಬರು ತಮ್ಮ ಮಾತೃ ಭಾಷೆಯನ್ನು ಹೆಮ್ಮೆಯಿಂದ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಅಲ್ಲದೆ ಇಂಥ ಬೆಳವಣಿಗೆಯು, ಇಡೀ ಹೊಸ ತಲೆಮಾರಿಗೆ ಮತ್ತು ಇಡೀ ಜಗತ್ತಿಗೆ ನಮ್ಮ ವೈವಿಧ್ಯಮಯ ಸಂಸ್ಕೃತಿಯನ್ನು ಪರಿಚಯಿಸುತ್ತದೆ ಎಂದು ಹೇಳಿದ್ದಾರೆ. ಮಾಸಿಕ ‘ಮನ್‌ ಕೀ ಬಾತ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಸ್ವಾತಂತ್ರ್ಯಾನಂತರದ 75 ವರ್ಷಗಳ ನಂತರವೂ ತಮ್ಮ ಭಾಷೆ, ವಸ್ತ್ರ, ಆಹಾರ ಮತ್ತು ಪಾನೀಯಗಳ ಹಿರಿಮೆ ಬಗೆಗಿನ ಗೊಂದಲ ಮತ್ತು ಕೀಳರಿಮೆ ಇನ್ನೂ ಉಳಿದುಕೊಂಡಿದೆ.

ವಿಶ್ವದಲ್ಲಿ ಎಲ್ಲೂ ಇಲ್ಲ ಇಂಥ ಮನೋಭಾವ ನಮ್ಮಲ್ಲೂ ಬೇಡ. ಭಾಷಾ ಶ್ರೀಮಂತಿಕೆಯಲ್ಲಿ ಭಾರತ ಇಡೀ ವಿಶ್ವದಲ್ಲೇ ಅದ್ವಿತೀಯವಾದುದು. ಹೀಗಾಗಿ ಪ್ರತಿಯೊಬ್ಬರು ತಮ್ಮ ಮಾತೃಭಾಷೆಯಲ್ಲಿ ಹೆಮ್ಮೆಯಿಂದ ಮಾತನಾಡಬೇಕು’ ಎಂದು ಕರೆಕೊಟ್ಟರು.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *