ಉತ್ತರಪ್ರದೇಶ :ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರ ಸುರಕ್ಷಿತ ಸ್ಥಳಾಂತರ ಕಾರ್ಯ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ. ಭಾರತೀಯರನ್ನು ಸುರಕ್ಷಿತವಾಗಿ ಕರೆ ತರಲು ಅವಿರತ ಶ್ರಮ ವಹಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿದ ಅವರು, ಈ ವಿಚಾರ ತಿಳಿಸಿದ್ದಾರೆ. ನಾಗರಿಕ ವಿಮಾನ ಕಾರ್ಯಾಚರಣೆಗಳಿಗಾಗಿ ಉಕ್ರೇನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಸ್ಥಳಾಂತರ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದರು.
ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ದೇಶವನ್ನು ‘ಆತ್ಮನಿರ್ಭರ್’ ಮಾಡುವ ಮೂಲಕ ಬಲಪಡಿಸುವ ಸಮಯ ಬಂದಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

