Breaking News

ಬಿಡದಿ ನಗರಕ್ಕೆ ತಲುಪಿದ ಮೇಕೆದಾಟು ಪಾದಯಾತ್ರೆ

ರಾಮನಗರ : ಮೊದಲ ದಿನದ ಮೇಕೆದಾಟು ಪಾದಯಾತ್ರೆ ರೇಷ್ಮೆ ನಗರಿ ರಾಮನಗರದಿಂದ ಆರಂಭವಾಗಿ 16 ಕಿ.ಮಿ. ಸಂಚರಿಸಿ ಬಿಡದಿ ನಗರ ತಲುಪಿದೆ.

ಮೊದಲ ದಿನದ ಮೇಕೆದಾಟು ಪಾದಯಾತ್ರೆ ಯಶಸ್ವಿ
ಮೊದಲ ದಿನದಲ್ಲಿ ಹೊರಟ ಪಾದಯಾತ್ರೆಯು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿತು. ಜಾನಪದ ಕಲಾ ತಂಡಗಳು ಕೂಡ ಪಾದಯಾತ್ರೆಗೆ ಸಾಥ್ ನೀಡಿದ್ದವು. ನಂತರ ಮಧ್ಯಾಹ್ನ ಮಾಯಗನಹಳ್ಳಿಯಲ್ಲಿ ಭೋಜನ ಮುಗಿಸಿದ ಮುಖಂಡರು, ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಪಾದಯಾತ್ರೆ ಮುಂದುವರೆಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *