Breaking News

ಶಿವಮೊಗ್ಗದಲ್ಲಿ ಇಂದಿನಿಂದ ಶಾಲೆ ಕಾಲೇಜ್ ಪ್ರಾರಂಭ


ಶಿವಮೊಗ್ಗ: ಹಿಜಾಬ್‌ ವಿವಾದ, ಕರ್ಫ್ಯೂ ಹಿನ್ನೆಲೆಯಲ್ಲಿ 15 ದಿನದಿಂದ ಶಿವಮೊಗ್ಗ ನಗರದಲ್ಲಿ ಬಂದ್‌ ಆಗಿದ್ದ ಶಾಲಾ-ಕಾಲೇಜುಗಳು ಸೋಮವಾರದಿಂದ ಆರಂಭ ಗೊಳ್ಳಲಿದೆ. ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಕೆಲ ಕಾಲೇಜುಗಳಲ್ಲಿ ಕಲ್ಲು ತೂರಾಟ, ಭಗವಾಧ್ವಜ ಹಾರಾಟ ವಿವಾದ ನಡೆದಿತ್ತು. ಹಲವೆಡೆ ಘರ್ಷಣೆಗಳು ಕೂಡ ನಡೆದಿದ್ದವು.

ವಿದ್ಯಾರ್ಥಿನಿಯರು ಹಿಜಾಬ್‌ಗ ಅವಕಾಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ಕೂಡ ನಡೆಸಿದ್ದರು. ಇದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿಭಂಗವಾಗಿತ್ತು. ಇದನ್ನು ಹತೋಟಿಗೆ ತರಲು ಕೆಲ ದಿನ ಶಾಲೆಗಳಿಗೆ ರಜೆ ನೀಡಿ, ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ಅನಂತರ ಶಾಲೆಗಳು ಆರಂಭ ಗೊಂಡ ಎರಡೇ ದಿನಕ್ಕೆ ಅಂದರೆ ಫೆ. 20ರಂದು ನಗರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ನಡೆದು, ನಗರದಲ್ಲಿ ಶಾಂತಿ ಭಂಗಕ್ಕೆ ಕಾರಣವಾಗಿತ್ತು. ಕಲ್ಲು ತೂರಾಟ, ಕಟ್ಟಡ, ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ನಿಷೇಧಾಜ್ಞೆ ಜತೆ ಕರ್ಫ್ಯೂ ವಿ ಧಿಸಲಾಯಿತು. ಈ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *