Breaking News

ಜೂನ್‌ ಅಂತ್ಯದಲ್ಲಿ 4ನೇ ಕೋವಿಡ್ ಅಲೆ ಪ್ರಾರಂಭ


ಹೈದರಾಬಾದ್‌ : ದೇಶದಲ್ಲಿ ಕೋವಿಡ್‌ 3ನೇ ಅಲೆ ಇನ್ನೇನು ಅಂತ್ಯಕ್ಕೆ ಸಮೀಪಿಸಿದೆ ಅನ್ನುವಷ್ಟರಲ್ಲೇ, 2022ರ ಜೂನ್‌ ಅಂತ್ಯದ ವೇಳೆಗೆ ದೇಶದ ಮೇಲೆ ಸೋಂಕಿನ 4ನೇ ದಾಳಿಯ ಸಾಧ್ಯತೆ ಇದೆ ಎಂದು ಐಐಟಿ ಕಾನ್ಪುರದ ತಜ್ಞರ ತಂಡ ಎಚ್ಚರಿಸಿದೆ.

ಒಂದು ವೇಳೆ 4ನೇ ಅಲೆ ಕಾಣಿಸಿಕೊಂಡಿದ್ದೇ ಆದಲ್ಲಿ ಅದರ ಪರಿಣಾಮಗಳು, ಆಗ ಹುಟ್ಟಿಕೊಳ್ಳಬಹುದಾದ ಹೊಸ ರೂಪಾಂತರಿಯ ತೀವ್ರತೆ, ಕೋವಿಡ್‌ ಲಸಿಕೆ ವಿತರಣೆಯ ಸ್ಥಿತಿಗತಿ, ಬೂಸ್ಟರ್‌ ಡೋಸ್‌ ನೀಡಿಕೆ ಅವಲಂಬಿಸಿರುತ್ತದೆ ಎಂದು ಹೇಳಿದೆ. ಐಐಟಿ ಕಾನ್ಪುರದ ಎಸ್‌.ಪಿ.ರಾಜೇಶ್‌ಭಾಯಿ, ಶುಭ್ರಾಶಂಕರ್‌ ಧರ್‌ ಮತ್ತು ಶಲಭ್‌ ಅವರನ್ನೊಳಗೊಂಡ ತಂಡವು ಬೂಟ್‌ಸ್ಟ್ರಾಪ್‌ ಎಂಬ ಸಾಂಖ್ಯಿಕ ಮಾದರಿಯನ್ನು ಆಧರಿಸಿ ವರದಿಯೊಂದನ್ನು ತಯಾರಿಸಿದ್ದು, ಅದರಲ್ಲಿ ಈ ಮಾಹಿತಿ ಇದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *