Breaking News

2024ರೊಳಗೆ ಕರ್ನಾಟಕದ ರಸ್ತೆಗಳು ಅಮೆರಿಕ ಮಾದರಿಗೆ ಮಾರ್ಪಟ್ಟ : ನಿತಿನ್‌ ಗಡ್ಕರಿ


ಬೆಂಗಳೂರು : ಭಾರತದ ರಸ್ತೆಗಳ ಗುಣಮಟ್ಟವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಗುರಿ ಹೊಂದಿದ್ದು 2024ರೊಳಗೆ ಕರ್ನಾಟಕದ ಎಲ್ಲ ರಸ್ತೆಗಳ ಗುಣಮಟ್ಟವನ್ನು ಅಮೆರಿಕ ಮಾದರಿಗೆ ಎತ್ತರಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ ಮತ್ತು ಮಂಗಳೂರುಗಳಲ್ಲಿ ಸೋಮವಾರ ಒಂದೇ ದಿನದಲ್ಲಿ ನಡೆದ ಪ್ರತ್ಯೇಕ ಸಮಾರಂಭಗಳಲ್ಲಿ ಅವರು ಒಟ್ಟಾರೆ ರಾಜ್ಯದ ವಿವಿಧೆಡೆ ನಡೆಯಲಿರುವ .19,930 ಕೋಟಿ ವೆಚ್ಚದ 46 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

2024ರ ಅಂತ್ಯದೊಳಗೆ ಕರ್ನಾಟಕದ ರಸ್ತೆಗಳನ್ನು ಅಮೆರಿಕದ ರಸ್ತೆಗಳ ಗುಣಮಟ್ಟಕ್ಕೆ ಸಮನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದಕ್ಕೆ ಪೂರಕವೆಂಬಂತೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ ಅವರು, ಅರಣ್ಯ ಹಾಗೂ ಪರಿಸರ ಇಲಾಖೆಗಳ ಕ್ಲಿಯರೆನ್ಸ್‌ ಪಡೆಯುವ ಕಾರ್ಯಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು ಎಂದು ನುಡಿದರು.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *