ದೇವನಹಳ್ಳಿ(ಬೆಂಗಳೂರು): ಉಕ್ರೇನ್ನಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿಂದ ಅವರನ್ನು ಮರಳಿ ದೇಶಕ್ಕೆ ಕರೆತರುವ ಕೆಲಸ ಆಗುತ್ತಿದೆ. ಅದರಂತೆ ಐವರು ವಿದ್ಯಾರ್ಥಿಗಳು ಉಕ್ರೇನ್ನಿಂದ ದೆಹಲಿಗೆ ಬಂದು, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ 8 ಗಂಟೆಗೆ ಆಗಮಿಸಿದ್ದಾರೆ.
ಸೋಮವಾರ ರಾತ್ರಿ 5 ವಿದ್ಯಾರ್ಥಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿದ್ಯಾರ್ಥಿಗಳಾದ ಶ್ರವಣ ಸಂಗಣ್ಣ, ಶಕ್ತಿಶ್ರೀ ಶೇಖರ್, ಮೈನಾ ಅನಿಲ್ ನಾಯಕ್, ನಿಹಾರಿಕಾ, ಆಶಾ ವೆಂಕಟೇಶ್ ರೆಡ್ಡಿ ಅವರನ್ನು ಪೋಷಕರು ಬರಮಾಡಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

