ಬೆಂಗಳೂರು: ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ 2 ಕಿ. ಮೀ. ವ್ಯಾಪ್ತಿಯಲ್ಲಿ ಮಾರ್ಚ್ 4 ರಿಂದ 30ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಮಯದಲ್ಲಿ ಪ್ರತಿಭಟನೆ ನಡೆಸುವುದು ನಿರ್ಬಂಧಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 4 ರಿಂದ 30ರ ತನಕ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಮಾರ್ಚ್ 4ರಂದು ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನ ಮುಗಿಯುವ ತನಕ ವಿಧಾನಸೌಧದ 2 ಕಿ. ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

