Breaking News

ರೊಮೇನಿಯಾದ ಪ್ರಧಾನಿಗೆ ಕರೆ ಮೂಲಕ ಧನ್ಯವಾದ ತಿಳಿಸಿದ ಮೋದಿ

ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಪ್ರಧಾನಿ ನರೇಂದ್ರ ಮೋದಿ, ರೊಮೇನಿಯಾದ ಪ್ರಧಾನಿ ನಿಕೋಲೇ-ಐಯೋನೆಲ್ ಸಿಯುಕಾ ಜತೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಉಕ್ರೇನ್‌ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವಲ್ಲಿ ರೊಮೇನಿಯಾ ನೀಡಿದ ನೆರವಿಗಾಗಿ ಪ್ರಧಾನಿ ನಿಕೊಲೆ – ಐಯೋನೆಲ್ ಸಿಯುಕಾ ಅವರಿಗೆ ಧನ್ಯವಾದ ಹೇಳಿದರು. ಭಾರತೀಯ ನಾಗರಿಕರಿಗೆ ವೀಸಾಗಳಿಲ್ಲದೇ ರೊಮೇನಿಯಾ ಪ್ರವೇಶಿಸಲು ಅವಕಾಶ ನೀಡಿದ್ದನ್ನು ವಿಶೇಷವಾಗಿ ಶ್ಲಾಘಿಸಿದರು.

ಸ್ಥಳೀಯ ಅಧಿಕಾರಿಗಳ ಸಮನ್ವಯದೊಂದಿಗೆ ಮುಂದಿನ ಕೆಲವು ದಿನಗಳಲ್ಲಿ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡಲು ತಮ್ಮ ವಿಶೇಷ ಪ್ರತಿನಿಧಿಯಾಗಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ನಿಯೋಜಿತವಾಗಿರುವ ವಿಚಾರವನ್ನು ರೊಮೇನಿಯಾ ಅಲ್ಲಿನ ಪ್ರಧಾನಮಂತ್ರಿಗಳ ಗಮನಕ್ಕೆ ತಂದರು.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಮಾನವೀಯ ಬಿಕ್ಕಟ್ಟಿನ ಬಗ್ಗೆ ಪ್ರಧಾನಮಂತ್ರಿ ಮೋದಿ ತಮ್ಮ ಕಳವಳ ವ್ಯಕ್ತಪಡಿಸಿದರು. ಯುದ್ಧ ನಿಲ್ಲಿಸಲು ಮಾತುಕತೆಯೇ ಪರಿಹಾರ ಎಂದು ಮತ್ತೊಮ್ಮೆ ಪುನರುಚ್ಛರಿಸಿದರು. ರಾಷ್ಟ್ರಗಳ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಮಹತ್ವವನ್ನು ಪ್ರಧಾನಿ ಮೋದಿ ಇದೇ ವೇಳೆ ಒತ್ತಿ ಹೇಳಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *