ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 01 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ.ಗೆ ರೂ.2.50 ಹೆಚ್ಚಿಸಲಾಗಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ್‍ರಾವ್ ತಿಳಿಸಿದರು.
ಶಿಮುಲ್, ಮಾಚೇನಹಳ್ಳಿ ಇಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ ದರ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಪ್ರಗತಿಯಾಗಿದ್ದು ಫೆ.28 ರಂದು ನಡೆದ ಒಕ್ಕೂಟದ 416 ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

