ಗಂಗಾವತಿ: ಕಾಂಗ್ರೆಸ್ ವಿಧಾನ ಮಂಡಲ ಅಧಿವೇಶನ ನಡೆಯಲು ಬಿಡದೇ ರಾಜಕೀಯಕರಣಗೊಳಿಸಿದೆ ಎಂದು ಆರೋಪಿಸಿ ಇಲ್ಲಿನ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಂತರ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ,’ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆಗಳ ಕುರಿತು ಚರ್ಚಿಸಿಲ್ಲ. ರಾಷ್ಟ್ರಧ್ವಜದ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ನೀಡಿದ ಹೇಳಿಕೆ ತಿರುಚಿ ಅಧಿವೇಶನ ನಡೆಯದಂತೆ ಮಾಡಿದೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದೆ’ ಎಂದರು.
ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ನಗರ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಮಲ್ಲೇಶಪ್ಪ, ಎಚ್.ಗಿರೇಗೌಡ, ಜಿ.ಪಂ ಮಾಜಿ ಸದಸ್ಯ ಸಿದ್ದರಾಮಯ್ಯ ಸ್ವಾಮಿ, ವಾಸುದೇವ ನವಲಿ, ಉಮೇಶ್ ಸಿಂಗನಾಳ, ಕಾಶಿನಾಥ ಚಿತ್ರಗಾರ, ಸಿದ್ದಲಿಂಗಯ್ಯ, ದೇವಾನಂದ, ಚಂದ್ರು ನಾಡಗೌಡ, ಬಸವರಾಜ, ರೇಖಾ ರಾಯಬಾಗಿ ಹಾಗೂ ಶ್ರೀನಿವಾಸ ದೂಳ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

