Breaking News

ಬಿಜೆಪಿಗೆ 300ಕ್ಕಿಂತಲೂ ಅಧಿಕ ಸ್ಥಾನಗಳು ಲಭಿಸಲಿವೆ : ಆದಿತ್ಯನಾಥ್‌


ಇಂಫಾಲ್‌/ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 300ಕ್ಕಿಂತಲೂ ಅಧಿಕ ಸ್ಥಾನಗಳು ಲಭಿಸಲಿವೆ. ನಾನು ಭಗವಾಧಾರಿ. ಅದರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ದಿನವೂ ರಾಜ್ಯ ಸರ್ಕಾರಕ್ಕೆ ಪರೀಕ್ಷೆಯೇ ಆಗಿದೆ. ಹಿಂದಿನ ಅವಧಿಯಲ್ಲಿನ ನಮ್ಮ ಸಾಧನೆಯನ್ನು ಸುಧಾರಿಸಲು ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

ಸದ್ಯ ಐದು ಹಂತಗಳ ಚುನಾವಣೆಗಳು ಮುಕ್ತಾಯವಾಗಿವೆ. ಅದರಲ್ಲಿ 225 ಕ್ಷೇತ್ರಗಳಲ್ಲಿ ಬಿಜೆಪಿಯೇ ಜಯಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡು ಹಂತದಲ್ಲೂ ನಮ್ಮ ಪಕ್ಷಕ್ಕೇ ಹೆಚ್ಚಿನ ಸ್ಥಾನಗಳು ಲಭಿಸಿ 300ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಲಿದ್ದೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *