ಬೆಂಗಳೂರು: ಉಕ್ರೇನ್ ನ ಖಾರ್ಕಿವ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ನವೀನ್ ಮೃತಪಟ್ಟಿರುವ ಸಂಗತಿ ವಿಷಾದಕರ. ನವೀನ್ ಸಾವು ಬಹಳ ದುಃಖ ತರಿಸಿದೆ. 2-3 ದಿನಗಳಲ್ಲಿ ಮೃತದೇಹವನ್ನು ತರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಂಕರ್ ಗೌಡ ಅವರಿಗೆ ಇಬ್ಬರು ಮಕ್ಕಳು. ಒಬ್ಬ ಮಗ ಬೆಂಗಳೂರಿನಲ್ಲಿ ಪಿಎಸ್ ಡಿ ಓದುತ್ತಿದ್ದಾರೆ. ನವೀನ್ ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದರು. ಬೆಳಿಗ್ಗೆ ತಿಂಡಿ ತರಲು ಹೋದಾಗ ನಡೆದ ಶೆಲ್ ದಾಳಿಯಲ್ಲಿ ನವೀನ್ ಬಲಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

