ಬೆಂಗಳೂರು: ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ.ಯುದ್ಧ ದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿ ನಂತೆ ಅಪ್ಪಳಿಸಿದೆ.
ವೈದ್ಯನಾಗಬೇಕು ಎಂಬ ಕನಸು ಹೊತ್ತು ನವೀನ್ ಅಲ್ಲಿಗೆ ಹೋಗಿದ್ದರು. ಭಾರತದಲ್ಲಿ, ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ಅವರು ಉಕ್ರೇನ್ಗೆ ತೆರಳಿದ್ದರು.
ಯುದ್ಧವು ಅವರ ಕನಸನ್ನು ನುಚ್ಚುನೂರು ಮಾಡಿದೆ. ವಿದ್ಯಾರ್ಥಿ ನವೀನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಮಗನನ್ನು ಕಳೆದುಕೊಂಡು ಅತೀವ ದುಃಖದಲ್ಲಿರುವ ಅವರ ಪೋಷಕರಿಗೆ ನನ್ನ ಸಂತಾಪಗಳು. ನವೀನ್ ಅವರ ಪಾರ್ಥೀವ ಶರೀರವನ್ನು ಆದಷ್ಟು ಬೇಗ ಅವರ ಕುಟುಂಬಕ್ಕೆ ತಲುಪಿಸುವ ಕೆಲಸ ಸರಕಾರದಿಂದ ಆಗಬೇಕು ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

