ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಇವೆರಡೂ ಪಕ್ಷಗಳ ಜನಹಿತ ಬಯಸುವ ಅನೇಕ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಬೇರೆ ಜಿಲ್ಲೆಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಮತ್ತು ಅವರ ಬೆಂಬಲಿಗರ ಹಾಗೂ ಕಾಂಗ್ರೆಸ್ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಅವರ ಸೇರ್ಪಡೆಯಿಂದ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಲ್ಲಿ ದೊಡ್ಡ ಶಕ್ತಿ ಲಭಿಸಲಿದೆ. ದೇವನಹಳ್ಳಿ ಪ್ರಗತಿಪರ ಚಿಂತನೆ ಇರುವ ಕ್ಷೇತ್ರ. ಅಲ್ಲಿನ ಜನಸಮುದಾಯದ ಆಶಯ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿದೆ. ಇವತ್ತು ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್‌ನ ಹಲವು ಮುಖಂಡರು ಬಿಜೆಪಿ ಸೇರುತ್ತಿರುವುದರಿಂದ ಬಿಜೆಪಿ ನೇತೃತ್ವದ ಹೊಸ ರಾಜಕೀಯ ಸಮೀಕರಣ ಆಗುತ್ತಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

