Breaking News

ಕಾರಜೋಳಗೆ ತಿರುಗೇಟು ನೀಡಿದ ಡಿಕೆಶಿ


ಬೆಂಗಳೂರು: ಕಾಂಗ್ರೆಸ್‌ ಪಾದಯಾತ್ರೆಯಿಂದ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್‌ ಹೋರಾಟದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಲಿದೆ ಎಂದಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ.ಹಾಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನಾನೂ ಜಲಸಂಪನ್ಮೂಲ ಸಚಿವನಾಗಿದ್ದೆ. ಅಲ್ಪ ಸ್ವಲ್ಪ ಪರಿಜ್ಞಾನ ಇದೆ. ಗೋವಿಂದ ಕಾರಜೋಳ ಅವರು ತಮ್ಮ ಅಧಿಕಾರಿಗಳನ್ನು ಕರೆದುಕೊಂಡು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಿ. ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ. ಆಡ್ವಾಣಿ ಅವರು ರಥಯಾತ್ರೆ ಮಾಡಿದ್ದು ಬಿಟ್ಟರೆ ಅವರು ಬೇರೆ ಹೋರಾಟ ಮಾಡಿಲ್ಲ. ಆದರೆ ನಮಗೆ ಮಹಾತ್ಮಾ ಗಾಂಧೀಜಿ ಅವರು ಅಹಿಂಸಾ ಮಾರ್ಗದ ಹೋರಾಟ ಹೇಳಿಕೊಟ್ಟಿದ್ದು, ಅದು ನಮ್ಮ ರಕ್ತದ ಕಣಗಳಲ್ಲೇ ಬಂದಿದೆ ಎಂದು ತಿರುಗೇಟು ನೀಡಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *