Breaking News

ಪ್ರಧಾನಿ ವಿರುದ್ಧ ಆರೋಪ ಮಾಡಿದ ಡಿಕೆಶಿ

ಕೀವ್ : ಉಕ್ರೇನ್‌ನಲ್ಲಿ ನವೀನ್ ಸಾವಿನ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಅಲ್ಲಿಗೆ ತೆರಳಿದ್ದಾರೆ. ನಮ್ಮಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜುಗಳಿದ್ದರೂ ಬೇಡಿಕೆ ಹೆಚ್ಚಾಗಿರುವುದರಿಂದ ನಮ್ಮ ಸಾಕಷ್ಟು ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿಶ್ವದ ಇತರೆ ದೇಶಗಳು ತಮ್ಮ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಂಡಿದ್ದರೆ, ನಮ್ಮ ದೇಶದ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ. ಕೇಂದ್ರ ಸರ್ಕಾರ ನಿನ್ನೆಯಷ್ಟೇ ನಾಲ್ವರು ಸಚಿವರನ್ನು ವಿದ್ಯಾರ್ಥಿಗಳ ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ. ಕೇಂದ್ರ ಸರ್ಕಾರಕ್ಕೆ ಎಷ್ಟು ಬೇಜವಾಬ್ದಾರಿ ಇದೆ ಎಂಬುದನ್ನು ಇದು ತೋರುತ್ತದೆ ಎಂದು ಡಿಕೆಶಿ ಆರೋಪಿಸಿದ್ದಾರೆ.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *