ನುಪಾಡಾ(ಒಡಿಶಾ): ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ ಘಟನೆ ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಛತ್ತೀಸ್ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ.
ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

