ಬೆಂಗಳೂರು : ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿ ಶೇ. 1 ರಷ್ಟು ಸಮತಲ ಮೀಸಲು ಕಲ್ಪಿಸಿ ರೂಪಿಸಲಾಗಿರುವ ನಿಯಮವನ್ನು ಅಳವಡಿಸಿಕೊಳ್ಳುವಂತೆ ರಾಜ್ಯದ ಪ್ರಾಧಿಕಾರಗಳು ಹಾಗೂ ನಿಗಮ ಮಂಡಳಿಗಳಿಗೆ ಕೋರಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮಾಹಿತಿ ನೀಡಿದೆ.
ರಾಜ್ಯ ಸರ್ಕಾರ, ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ 1977 ರ ನಿಯಮ 9 ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿತ್ತು. ತಿದ್ದುಪಡಿ ಮೂಲಕ ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿಶೇ. 1 ರಷ್ಟು ಸಮತಲ ಮೀಸಲಾತಿ ಕಲ್ಪಿಸಿ 2021 ರ ಜು.6 ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

