Breaking News

ಉಕ್ರೇನ್‌ನಲ್ಲಿ ಸಿಲುಕಿರು 200 ವಿದ್ಯಾರ್ಥಿಗಳು ರೊಮೇನಿಯಾದಿಂದ ದೆಹಲಿಗೆ ಆಗಮನ


ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಸುಮಾರು 200 ಭಾರತೀಯರನ್ನು ಹೊತ್ತ ವಿಶೇಷ ವಿಮಾನವು ಇಂದು ರೊಮೇನಿಯಾದಿಂದ ದೆಹಲಿ ತಲುಪಿದೆ.

ʻಆಪರೇಷನ್ ಗಂಗಾ ಅಡಿಯಲ್ಲಿ ಇಂಡಿಗೋ ವಿಶೇಷ ವಿಮಾನವು ಬುಧವಾರ (ಸ್ಥಳೀಯ ಕಾಲಮಾನ) ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಹೊರಟಿದೆ.

ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ನಾಗರಿಕರನ್ನು ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ‘ನಾವು ಕಷ್ಟಗಳ ನಡುವೆಯೂ ನಮ್ಮ ನಾಗರಿಕರನ್ನು ಮರಳಿ ಕರೆತರುತ್ತಿದ್ದೇವೆ. ಸಂಕಷ್ಟದಲ್ಲಿರುವ ಪ್ರತಿಯೊಬ್ಬ ಭಾರತೀಯರನ್ನು ತಲುಪುವುದು ಮೋದಿ ಸರ್ಕಾರದ ಮೂಲ ಸಿದ್ಧಾಂತವಾಗಿದೆ’ ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ತಿಳಿಸಿದರು.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *