ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಕಾವೇರಿ ಚಿತ್ರಮಂದಿರ, ಸ್ಯಾಂಕಿ ಟ್ಯಾಂಕ್, ಮಲ್ಲೇಶ್ವರಂ 18ನೇ ಕ್ರಾಸ್, ಮಾರ್ಗೋಸಾ ರಸ್ತೆ, ಕೆಸಿ ಜನರಲ್ ಆಸ್ಪತ್ರೆ, ಶೇಷಾದ್ರಿಪುರಂ ಲಿಂಕ್ ರಸ್ತೆ, ರಾಜೀವ್ ಗಾಂಧಿ ಪ್ರತಿಮೆ, ಕಾಟನ್ ಪೇಟೆ ಮುಖ್ಯರಸ್ತೆ, ಬ್ರಿಯಾಂಡ್ ಸರ್ಕಲ್, ಈದ್ಗಾ ಮೈದಾನ ಮಾರ್ಗವಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಲಿದೆ.
ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

