Breaking News

ಉಕ್ರೇನ್‌ನಲ್ಲಿ ಸಿಲುಕಿರುವ 6 ಸಾವಿರ ಜನ ಭಾರತಕ್ಕೆ ವಾಪಸ್


ಹೊಸದಿಲ್ಲಿ: ಉಕ್ರೇನ್‌ನಲ್ಲಿ ಸಿಲುಕಿರುವ 20 ಸಾವಿರ ಭಾರತೀಯರಲ್ಲಿ 6 ಸಾವಿರ ಮಂದಿಯನ್ನು ಈಗಾಗಲೇ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ವಿ. ಮುರಳೀಧರನ್‌ ತಿಳಿಸಿದ್ದಾರೆ.

ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಹಾಗೂ ಇತರ ನಾಗರಿಕರು ಸೇರಿ ಒಟ್ಟು 20,000 ಮಂದಿಯಿದ್ದಾರೆ.

ಅವರಲ್ಲಿ 6,000 ಮಂದಿಯನ್ನು ವಾಪಸ್‌ ಕರೆಯಿಸಿಕೊಳ್ಳಲಾಗುತ್ತಿದೆ. ವಾಪಸ್‌ ಬಂದವರಲ್ಲಿ 4,000 ಮಂದಿಯನ್ನು ಯುದ್ಧ ಆರಂಭಕ್ಕೆ ಅಂದರೆ ಫೆ. 24ಕ್ಕಿಂತ ಮುನ್ನವೇ ಸ್ವದೇಶಕ್ಕೆ ಕರೆತರಲಾಗಿದೆ. ಮಂಗಳವಾರದವರೆಗೆ ಇನ್ನೂ 2,000 ಮಂದಿ ಭಾರತಕ್ಕೆ ಬಂದಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದರು.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *