ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನ ಹಾಗೂ ಅನುಷ್ಠಾನಕ್ಕಾಗಿ ಅಧಿಕಾರಿಗಳ ವೇತನ ಸಮಿತಿಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಈ ಸಂಬಂಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು ಕೇಂದ್ರ ಹಾಗೂ ಇತರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಸರ್ಕಾರಿ ನೌಕರರ ವೇತನವನ್ನು ಹೆಚ್ಚಳ ಮಾಡುವ ಅಗತ್ಯವಿದೆ. ಹೀಗಾಗಿ ಅದರ ಪರಾಮರ್ಶೆ ಮತ್ತು ಅನುಷ್ಠಾನಕ್ಕಾಗಿ ನಾಳಿನ ಬಜೆಟ್‍ನಲ್ಲಿ ಅಧಿಕಾರಿಗಳ ವೇತನ ಸಮಿತಿ ಘೋಷಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ 2016ರಲ್ಲಿ ಏಳನೆ ವೇತನ ಆಯೋಗದ ಶಿಫಾರಸುಗಳನ್ನಾಧರಿಸಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿದೆ. ದೇಶದ 28 ರಾಜ್ಯಗಳಲ್ಲೂ ಈಗಾಗಲೇ 25 ರಾಜ್ಯಗಳಲ್ಲಿ ಈ ಮಾದರಿ ಜಾರಿಯಲ್ಲಿದೆ ಎಂದು ಮನವರಿಕೆ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

