Breaking News

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು: ಸರ್ಕಾರ ಕೊಟ್ಟ ಮಾತು ತಪ್ಪಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮಾ.7 ರಿಂದ ಅರ್ನಿಷ್ಟಾವ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಫೆಡರೇಷನ್ ಎಚ್ಚರಿಸಿದೆ.

ಶುಕ್ರವಾರದಿಂದ ಬಜೆಟ್ ಅವೇಶನ ಆರಂಭವಾಗಲಿದೆ.
ಬಜೆಟ್‍ನಲ್ಲಿ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದರೆ 7 ರಿಂದ ಅಹೋರಾತ್ರಿ ಧರಣೆ ನಡೆಸಲಾಗುವುದು ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‍ಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

ನಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ನಾವು ಈಗಾಗಲೇ ಸರ್ಕಾರಕ್ಕೆ ಎರಡು ಬಾರಿ ಮನವಿ ಮಾಡಿಕೊಂಡಿದ್ದೇವೆ. ಸರ್ಕಾರ ಕೂಡ ಮುಂದಿನ ಬಜೆಟ್‍ನಲ್ಲಿ ನಿಮ್ಮ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದೆ.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *