ಬೆಂಗಳೂರು: ರೈತರ ಅನುಕೂಲಕ್ಕಾಗಿ ರಾಜ್ಯದ ವಿವಿಧೆಡೆ 100 ಕೋಲ್ಡ್ ಸ್ಟೋರೇಜ್ ತೆರೆಯಲು ಬಜೆಟ್‌ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ.
ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ( ಹಾಪ್‌ಕಾಮ್ಸ್), ಲಾಲ್‌ಬಾಗ್‌ನ ಡಾ.ಎಂ.ಎಚ್.ಮರೀಗೌಡ ರಸ್ತೆಯ ಹಾಪ್‌ಕಾಮ್ಸ್ ಪ್ರಧಾನ ಕಚೇರಿಯಲ್ಲಿ ಗುರುವಾರ ಏರ್ಪಡಿಸಿರುವ ದ್ರಾಕ್ಷಿ-ಕಲ್ಲಂಗಡಿ ಮಾರಾಟ ಮೇಳದಲ್ಲಿ ಮಾತನಾಡಿದರು.
ರೈತರು ಬೆಳೆದಿರುವ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ದಾಸ್ತಾನು ಮಾಡಲು 10 ಟನ್ ಸಾಮರ್ಥ್ಯದ ಎರಡು ಕೋಲ್ಡ್ ಸ್ಟೋರೇಜ್ ತೆರೆಯಲಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಕೋಲ್ಡ್ ಸ್ಟೋರೇಜ್ ತೆರೆಯಲು ನಿರ್ಧರಿಸಲಾಗಿದೆ. ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧವಾಗಿದೆ. ಖಾಸಗಿಯವರ ಜತೆ ಪೈಪೋಟಿ ನೀಡುವ ಉದ್ದೇಶದಿಂದ ಹಾಪ್‌ಕಾಮ್ಸ್ ಮಳಿಗೆಗಳನ್ನು ಮೇಲ್ದರ್ಜೆಗೇರಿಸಲು ಗುರಿ ಹಾಕಿಕೊಳ್ಳಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

