Breaking News

ತೇಜಸ್ವಿ ಸೂರ್ಯ ವಿರುದ್ಧ ತನಿಖೆಯನ್ನು ರದ್ದುಗೊಳಿಸಿದ ಹೈಕೋರ್ಟ್


ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆ ನಡೆಸಲು ಅನುಮತಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

2019 ರ ಲೋಕಸಭಾ ಚುನಾವಣೆ ವೇಳೆ ತೇಜಸ್ವಿ ಸೂರ್ಯ ಪರವಾಗಿ ಮುದ್ರಿಸಲಾಗಿದ್ದ ಕರಪತ್ರದಲ್ಲಿ ಮುದ್ರಕರ ಹೆಸರು, ವಿಳಾಸ ನಮೂದಾಗಿರಲಿಲ್ಲ ಇದು ಅಪರಾಧದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಿದ್ದಾಪುರ ಪೊಲೀಸ್ ಠಾಣೆಗೆ 2019ರ ಏಪ್ರಿಲ್‌ 18ರಂದು ದೂರು ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಅನುಮತಿ ನೀಡಬೇಕು ಎಂದು 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಇದನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆಗೆ ಅನುಮಿತಿಸಿ ಆದೇಶಿಸಿತ್ತು. ತನಿಖೆ ನಡೆಸಿದ್ದ ಸಿದ್ಧಾಪುರ ಠಾಣಾ ಪೊಲೀಸರು 2019ರ ಜುಲೈ 2ರಂದು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

‘ಕಳೆದ ಲೋಕಸಭಾ ಚುನಾವಣೆ ವೇಳೆ ಮುದ್ರಿಸಲಾಗಿದ್ದ ಕರಪತ್ರದಲ್ಲಿ ಮುದ್ರಕರ ಹೆಸರು ಹಾಗೂ ವಿಳಾಸ ಉಲ್ಲೇಖಿಸಿರಲಿಲ್ಲ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆ ನಡೆಸಲು ಅನುಮತಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.”

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *