Breaking News

ಸಿಎಂ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಕೃಷಿ ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ.

ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ನೀಡುವ ಸಾಧ್ಯತೆಯಿದೆ.ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳಕ್ಕೆ 7ನೇ ವೇತನ ಆಯೋಗವನ್ನು ರಚಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಕಟ್ಟಡ ಮತ್ತು ಗಾರ್ಮೆಂಟ್ಸ್ ಕಾರ್ಮಿಕರಿಗೆ ವಸತಿ ಸೌಲಭ್ಯ, ಉಚಿತ ಬಸ್ ಪಾಸ್ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share News

About admin

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *