Breaking News

ದೇಶದಲ್ಲಿ ಕೊರೊನಾ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತ



ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 6,396 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಮತ್ತೆ 201 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 514589 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 69897 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13450 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42367070 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 24,84,412 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,29,13,060 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 9,23,351 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *