ಶಿವಮೊಗ್ಗ: ಫೆ.20ರಂದು ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರು. ಪರಿಹಾರ ಘೋಷಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ತಾವು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಚೆಕ್ ಅನ್ನು ಹರ್ಷ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಆಸ್ತಿಗಳಿಗೆ ಹಾನಿಯಿಂದ ನಷ್ಟಕ್ಕೆ ಒಳಗಾದವರಿಗೂ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

