Breaking News

ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : 3 ಯೋಧರು ಸಾವು


ಬಸ್ತಿ(ಉತ್ತರ ಪ್ರದೇಶ): ಎರಡು ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಎರಡು ವಾಹನಗಳು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಈ ವೇಳೆ ಕೇಂದ್ರ ಭದ್ರತಾ ಪಡೆಯ 3 ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೇ ವೇಳೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನೂ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *