ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು,ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ
* ರಿಯಾಯಿತಿ ಬಸ್ ಪಾಸ್ ಯೋಜನೆ,
* ಹುಬ್ಬಳ್ಳಿ ಹಾಗೂ ದಾವಣಗೆರೆ ESI ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ
* ಯೆಲ್ಲೊ ಬೋರ್ಡ್ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್
* ಡ್ರೈವರ್ಸ್ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆ ಘೋಷಣೆ
* ಪ್ರಸಕ್ತ ಸಾಲಿನಲ್ಲಿ ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಮತ್ತು ವಿವಿಧ ಕಲ್ಯಾಣ ಇಲಾಖೆಗಳಿಗೆ ಕ್ರಮವಾಗಿ 6,329 ಕೋಟಿ ಹೆಚ್ಚುವರಿ ಅನುದಾನ.
* ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ವಲಯಕ್ಕೆ 55,657 ಕೋಟಿ ಅನುದಾನ
* ಬೆಂಗಳೂರು ಸಮಗ್ರ ಅಭಿವೃದ್ಧಿ ಗೆ,8,409 ಕೋಟಿ ಅನುದಾನ
* ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ 3,012 ಕೋಟಿ,
* ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವಾ ವಲಯಕ್ಕೆ 56,710 ಕೋಟಿ
* ಬೆಳಗಾವಿಯಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆ ನಿರ್ಮಾಣ
* ಬೆಳಗಾವಿ ಹಾಗೂ ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ.
* ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.
* ತಾಲೂಕು ಮಟ್ಟದಲ್ಲಿ ನೀಟ್ ಪರೀಕ್ಷೆ ತರಬೇತಿ ಕೇಂದ್ರ
* ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ 10, 000 ಮಂದಿಗೆ ಉದ್ಯೋಗ.
* ಹುಬ್ಬಳ್ಳಿಯಲ್ಲಿ 500 ಕೋಟಿ ರು ವೆಚ್ಚದಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆ
* ಬೆಂಗಳೂರಿನ ಯಲಹಂಕದಲ್ಲಿ ಅಟಲ್ ಬಿಹಾರ್ ವಾಜಪೇಯಿ ಪಾರ್ಕ್ ಸ್ಥಾಪನೆ 300 ಕೋಟಿ ರು ವೆಚ್ಚ.
* ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರು ಅನುದಾನ
* ಮೇಕೇದಾಟು ಯೋಜನೆ ಅನುಷ್ಠಾನಕ್ಕೆ 1000 ಕೋಟಿ ರು ಅನುದಾನ
* ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ 3000 ಕೋಟಿ ರು ಮಂಜೂರು
* ಭದ್ರಾ ಮೇಲ್ದಂಡೆ ಯೋಜನೆಗೆ 3000 ಕೋಟಿ ರು ಮಂಜೂರು
* ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರು ಮಂಜೂರು
* 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಅನುದಾನ.
* ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ರ ಸೇವಾನುಭವ ಆಧಾರದಲ್ಲಿ ಸಾವಿರದಿಂದ 1500 ರೂಗಳ ಹೆಚ್ಚಳ ಹಾಗೂ ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುತ್ತದೆ.
ರಾಜ್ಯದ ಸ್ಮಾರಕಗಳನ್ನು ದತ್ತು ಯೋಜನೆ ಘೋಷಣೆ, ಈ ಮೂಲಕ ಬೀದರ್, ಕಲಬುರಗಿ ಕೋಟೆಗಳ ಪುನರುಜ್ಜೀವನ ,ಅಭಿವೃದ್ಧಿ,
* ಶ್ರೀಶೈಲದಲ್ಲಿ ₹85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ , ಮೊದಲ ಹಂತದಲ್ಲಿ 45 ಕೋಟಿ ರೂಪಾಯಿ,
* ಕಾಶಿಯಾತ್ರೆ ಕೈಗೊಳ್ಳುವವರಿಗೆ 5 ಸಾವಿರ ರು ಸಹಾಯಧನ
* ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ,
* ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭ
bigtvnews | Hubli Dharwad News | Kannada News | Karnataka News Hubli News | News In Hubli | Local news

