Breaking News

ಕರ್ನಾಟಕದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ : ಬೊಮ್ಮಾಯಿ


ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು. ಉನ್ನತ ಶಿಕ್ಷಣಕ್ಕೆ ಉಚಿತ ಆನ್​ಲೈನ್ ಕೋಚಿಂಗ್ ಯೋಜನೆ ನೀಡಲಾಗುವುದು ಎಂದು ಶಿಕ್ಷಣ ಕ್ಷೇತ್ರದ ವಿಶೇಷ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಇಂದು (ಮಾರ್ಚ್ 4) ಚೊಚ್ಚಲ ಕರ್ನಾಟಕ ಬಜೆಟ್​ ಮಂಡನೆ ಮಾಡುತ್ತಿದ್ದಾರೆ.

ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು. ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಲಾಗುವುದು. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ನೋಡಿ ಕಲಿ, ಮಾಡಿ ಕಲಿ ಕಲ್ಪನೆಯಡಿ ಕಿಟ್ ವಿತರಣೆ ಮಾಡಲಾಗುವುದು. 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಕಿಟ್ ವಿತರಿಸಲಾಗುವುದು. ಲ್ಯಾಬ್ ಇನ್ ಎ ಕಿಟ್ ವಿತರಣೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ನೀಡಲಾಗಿದೆ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ ಕೊಡಲಾಗಿದೆ. ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂಪಾಯಿ ಘೋಷಿಸಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *