Breaking News

ಮೂಕ ಪ್ರಾಣಿಯನ್ನು ಬೀಡದ ಕಾಮುಕ : ಆರೋಪಿ ಅರೆಸ್ಟ್


ಮುಂಬೈ: ಬೀದಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಅಂಬರ್‌ನಾಥ್‌ನಲ್ಲಿ ರಿಜ್ವಾನ್ ಶೇಖ್ (45) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತನ್ನ ಮನೆಯ ಮುಂದಿನ ರಸ್ತೆಯಲ್ಲಿ ಸುತ್ತಾಡುತ್ತಿದ್ದ ಬೀದಿನಾಯಿಯನ್ನು ಬಲವಂತವಾಗಿ ಮನೆಯೊಳಗೆ ಎಳೆದುಕೊಂಡು ಹೋಗುವುದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ನೋಡಿದ್ದರು.

ಇದರಿಂದ ಅನುಮಾನಗೊಂಡ ಅವರು ಆತನನ್ನು ಗಮನಿಸುತ್ತಿದ್ದರು. ನಂತರ ಆ ಬೀದಿನಾಯಿ ತೀವ್ರ ನೋವಿನಿಂದ ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿ ಅದನ್ನು ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಈ ವೇಳೆ ನಾಯಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬುದು ಗೊತ್ತಾಗಿದೆ. ರಿಜ್ವಾನ್ ಶೇಖ್ ಅಂಬರನಾಥದ ಸಿದ್ಧಾರ್ಥನಗರದಲ್ಲಿ ವಾಸಿಸುತ್ತಿದ್ದು, ದಿನಗೂಲಿ ಕೆಲಸ ಮಾಡುತ್ತಿದ್ದ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *