Breaking News

ನವೀನ ಕುಟುಂಬಕ್ಕೆ ₹25 ಲಕ್ಷ ಪರಿಹಾರ : ಬಿಎಸ್ ವೈ


ಚಳಗೇರಿ (ಕುಮಾರಪಟ್ಟಣ): ‘ರಾಜ್ಯ ಸರ್ಕಾರದಿಂದ ಮೃತ ನವೀನ ಗ್ಯಾನಗೌಡರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗೊಂಡಿದ್ದಾರೆ. ಬೊಮ್ಮಾಯಿ ಅವರೇ ಶನಿವಾರ ಇಲ್ಲಿಗೆ ಬಂದು ಪರಿಹಾರದ ಚೆಕ್ ವಿತರಿಸುವ ನಿರೀಕ್ಷೆಯಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿರುವ ಮೃತ ನವೀನ ಗ್ಯಾನಗೌಡರ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ, ಪಾಲಕರಿಗೆ ಸಮಾಧಾನ ಪಡಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಯಸ್ಸಿಗೆ ಬಂದ ಮಗನನ್ನು ಕಳೆದುಕೊಂಡ ತಂದೆ-ತಾಯಿಯ ನೋವು ಮತ್ತು ಕಣ್ಣೀರಿಗೆ ಸಾಂತ್ವನ ಹೇಳಲು ನನ್ನ ಬಳಿ ಪದಗಳೇ ಇಲ್ಲದಂತಾಗಿದೆ. ಇಂಥ ಪರಿಸ್ಥಿತಿ ಯಾವ ಪೋಷಕರಿಗೂ ಬರಬಾರದು ಎಂದು ಅವರು ಮರುಕ ವ್ಯಕ್ತಪಡಿಸಿದರು.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *