Breaking News

ನವೀನ್ ಮೃತದೇಹವನ್ನು ತಾಯ್ನಾಡಿಗೆ ತರಲು ಸತತ ಪ್ರಯತ್ನ: ಬೊಮ್ಮಾಯಿ

ಹಾವೇರಿ :ಉಕ್ರೇನ್ ಯುದ್ಧದಲ್ಲಿ ಬಾಂಬಿಂಗ್ ಪರಿಣಾಮ ಸಾವನ್ನಪ್ಪಿರುವ ನವೀನ್ ಮೃತದೇಹವನ್ನು ತಾಯ್ನಾಡಿಗೆ ತರಲು ಪ್ರಯತ್ನ ನಡೆದಿದೆ ಹಾಗೂ ಇನ್ನೂ ಉಕ್ರೇನ್‍ನಲ್ಲಿ ಉಳಿದಿರುವ ವಿದ್ಯಾರ್ಥಿಗಳನ್ನು ಕರೆತರುವ ಕಾರ್ಯ ಪ್ರಗತಿಯಲ್ಲಿದೆ.

ಈ ನಿಟ್ಟಿನಲ್ಲಿ ಕೇಂದ್ರದೊಂದಿಗೆ ಈಗಾಗಲೇ ಸಂಪರ್ಕದಲ್ಲಿದ್ದೇವೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇತ್ತೀಚೆಗೆ ಉಕ್ರೇನ್‍ನಲ್ಲಿ ಮೃತಪಟ್ಟ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರ ಮನೆಗೆ ಶನಿವಾರ ಭೇಟಿ ನೀಡಿ, ಮೃತ ನವೀನ್ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಗೌರವ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ ರೂ.25 ಲಕ್ಷಗಳ ನೆರವಿನ ಚೆಕ್ ವಿತರಿಸಿದರು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *