Breaking News

ಕೆಲಸ ಹೆಸರಿನಲ್ಲಿ ಅತ್ಯಾಚಾರ : ಧಾರವಾಡ ಖಾಸಗಿ ವಾಹಿನಿಯ ಪತ್ರಕರ್ತ ಬಂಧನ


ಧಾರವಾಡ: ಕೆಲಸ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಧಾರವಾಡದ ಖಾಸಗಿ ವಾಹಿನಿಯ ಪತ್ರಕರ್ತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಸೋಮಾಪೂರ ಗ್ರಾಮದ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಾಸಗಿ ವಾಹಿನಿ ಪತ್ರಕರ್ತ ಕೃಷ್ಣಮೂರ್ತಿ ಕುಲಕರ್ಣಿಯನ್ನು ಬಂಧಿಸಿದ್ದಾರೆ.

ಮಹಿಳೆಗೆ ಕೆಲಸ ಕೊಡಿಸುವುದಾಗಿ ಮಹಿಷಿ ರಸ್ತೆಯಲ್ಲಿರುವ ತನ್ನ ನಿವಾಸಕ್ಕೆ ಕರೆಸಿಕೊಂಡಿದ್ದ ಆರೋಪಿ ಫೆಬ್ರವರಿ 27 ರಿಂದ ಮಾರ್ಚ್ 1ರ ನಡುವೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವೈದ್ಯಕೀಯ ತಪಾಸಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *