Breaking News

ಹರ್ಷ ಮನೆಗೆ ಮಾಜಿ ಸಿಎಂ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ


ಶಿವಮೊಗ್ಗ: ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್ ನೀಡಿದರು.

ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ ಮುಖಂಡನಾಗಿ ಹರ್ಷ ಬೆಳೆಯುತ್ತಿದ್ದ. ಇದನ್ನೂ ಸಹಿಸಕ್ಕಾಗದೇ ಕೆಲವು ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ. ಇದು ಅತ್ಯಂತ ಅಮಾನುಷ ಕೃತ್ಯ ಎಂದು ಹೇಳಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *