ಬಳ್ಳಾರಿ: 2022-23ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶ್ರೀರಾಮುಲು, ಬಾಯಿ ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗದು ಎಂದು ಹೇಳಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಅಡ್ಡಕಸಬಿ ಬಜೆಟ್ ಎಂದಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಇದು ಸಿದ್ದರಾಮಯ್ಯ ಅವರ ಭಂಡತನ, ಮೊಂಡುತನಕ್ಕೆ ಸಾಕ್ಷಿ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾದರೆ ಅವರು ಮಂಡಿಸಿದ್ದು ಕೂಡ ಬಡಾಯಿ ಬಜೆಟ್ ಆಗಿತ್ತಾ? ಎಂದು ಪ್ರಶ್ನಿಸಿದ್ದಾರೆ.
ಇಂತಹ ಹೇಳಿಕೆಗಳು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶೋಭೆ ತರುವುದಿಲ್ಲ. ಅಧಿಕಾರಕ್ಕೆ ಬರಬೇಕು ಎಂಬ ದುರುದ್ದೇಶಕ್ಕೆ ಕೇವಲವಾಗಿ ಮಾತನಾಡುವುದು ಸರಿಯಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

