ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಅಡ್ಡಿಯಾಗದು. ನಮ್ಮ ಡಿಪಿಆರ್ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು. ಮಹದಾಯಿ ನದಿ ನೀರು ಹಂಚಿಕೆ ಬಗ್ಗೆ ಮೂರು ರಾಜ್ಯಗಳ ವ್ಯಾಜ್ಯ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಅದು ಕಳಸಾ ಬಂಡೂರಿಗೆ ಅಡ್ಡಿಯಾಗದು. ಮುಂದಿನ ತಿಂಗಳ ಅಂತ್ಯದ ವೇಳೆಗೆ ಅನುಮೋದನೆ ದೊರೆಯುವ ವಿಶ್ವಾಸವಿದೆ. ಯೋಜನೆಗೆ ಆಯವ್ಯಯದಲ್ಲಿ 1000 ಕೋಟಿ ರೂ ತೆಗೆದಿರಿಸಿರುವುದು ದೊಡ್ಡ ನೆಗೆತ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

