ಬಳ್ಳಾರಿ: ಉಕ್ರೇನ್ನಿಂದ ಎಲ್ಲಾ ವಿದ್ಯಾರ್ಥಿಗಳನ್ನು ಕರೆತರಲಾಗಿದೆ. 1 ಲಕ್ಷ ಹಣ ಪಡೆದು ಕರೆತಂದಿದ್ದಾರೆ ಎಂಬುದು ಸುಳ್ಳು. ಭಾರತ ಸರ್ಕಾರ ಹರಸಾಹಸಮಾಡಿ ಮಕ್ಕಳನ್ನು ಕರೆತಂದಿದೆ. ವಿದ್ಯಾರ್ಥಿಗಳನ್ನು ಕರೆತರಲು ನಾಲ್ವರು ಸಚಿವರನ್ನು ನಿಯೋಜನೆ ಮಾಡಲಾಗಿದೆ ಎಂದು ಬಳ್ಳಾರಿಯಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಇನ್ನೂ ರಷ್ಯಾ – ಉಕ್ರೇನ್ ಮಧ್ಯೆ ಯುದ್ಧ ಹಿನ್ನಲೆ ಸ್ವದೇ ಶಕ್ಕೆ ಮರಳಿದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಸಚಿವ ಶ್ರೀ ರಾಮುಲು ಮಾತನಾಡಿಸಿದ್ದಾರೆ. ಬಳ್ಳಾರಿಯ ಸಬಾ ಕೌಸರ್, ತೈಯಬ್ ಕೌಸರ್, ಮೊಹಮ್ಮದ್ ಶಕೀಬುದ್ದೀನ್ರ ನಿವಾಸಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಚಿವ ಶ್ರೀ ರಾಮುಲು ಸಮಾಲೋಚನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

