ದಾವಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ 26 ಮತ್ತು 27ರಂದು ಎಲೆಬೇತೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಜಿ.ಎಸ್. ಸುಶೀಲಾದೇವಿ ಆರ್. ರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ.
ಮಾರ್ಚ್ ಅಂತ್ಯದ ಒಳಗೆ ಈ ಬಾರಿಯ ಜಿಲ್ಲಾ ಸಮ್ಮೇಳನಗಳನ್ನು ಮುಗಿಸಬೇಕು ಎಂದು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯಲ್ಲಿ ಸೂಚನೆ ನೀಡಲಾಗಿದೆ. ಅದರಂತೆ ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

