Breaking News

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ದಿನಾಂಕ ಘೋಷಣೆ


ಬೆಂಗಳೂರು: ಜೆಇಇ ಪರೀಕ್ಷೆಯಂದೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ದಿನಾಂಕ ಘೋಷಣೆಯಿಂದಾಗಿ, ಮತ್ತೆ ಪಿಯು ಬೋರ್ಡ್ ನಿಂದ ವಾರ್ಷಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ತಾತ್ಕಾಲಿಕ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ದಿನಾಂಕ 22-04-2022ರಿಂದ 11-05-2022ರವರೆಗೆ ನಿಗದಿಪಡಿಸಲಾಗಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 05-03-2022ರ ಸಂಜೆ 5 ಗಂಟೆಯವರೆಗೆ ಸಮಯ ನೀಡಲಾಗಿತ್ತು.

ಕಾಮನ್ ಲಾ ಅಡ್ಮೀಷನ್ ಟೆಸ್ಟ್ ಹಾಗು AIMA UGAT ಪರೀಕ್ಷೆ ಹಾಗು ನವೋದಯ ವಿದ್ಯಾಲಯ ಪರೀಕ್ಷೆ ನಿಗದಿಯಾಗಿರುವದರಿಂದ ಹಾಗೂ ವಿದ್ಯಾರ್ಥಿಗಳಿಂದ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಿ, ದಿನಾಂಕ 22-04-2022ರಿಂದ 18-05-2022ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಇದು ಅಂತಿಮ ವೇಳಾಪಟ್ಟಿಯಾಗಿದ್ದು, ಇನ್ನೂ ಮುಂದೆ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *