Breaking News

ಮಾ.12 ರಂದು ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯಗೆ ಸಿಎಂ ಚಾಲನೆ


ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ’ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮದಿಂದ ಮಾರ್ಚ್ 12 ರಂದು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಗುಂಗಿರ್ಲಹಳ್ಳಿ (ಮಜರೆ) ಗ್ರಾಮದಲ್ಲಿ 171 ಕುಟುಂಬಗಳಿದ್ದು 977 ಜನರು ವಾಸವಿದ್ದಾರೆ, ಈ ಪೈಕಿ 157 ಖಾತೆದಾರರಿದ್ದಾರೆ. 977 ಜನಸಂಖ್ಯೆ ಯುಳ್ಳ ಈ ಕುಗ್ರಾಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸಿ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹಾಗೂ ಇತರೆ ದಾಖಲೆಗಳನ್ನು ಖುದ್ದಾಗಿ ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸುವ ಮೂಲಕ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *