Breaking News

ಡಬಲ್‌ ಎಂಜಿನ್‌ ಸರ್ಕಾರವಲ್ಲ, ಡಬ್ಬಾ ಸರ್ಕಾರ : ಮಾಜಿ ಸಿಎಂ ಸಿದ್ದರಾಮಯ್ಯ


ಬೆಂಗಳೂರು: ‘ಡಬಲ್‌ ಎಂಜಿನ್‌ ಸರ್ಕಾರ ಬಂದರೆ ರಾಜ್ಯವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿಕೊಂಡಿದ್ದರು. ಅವರ ಕಾಲದಲ್ಲಿ ರಾಜ್ಯ ದಿವಾಳಿಯತ್ತ ಸಾಗಿದೆ. ಇಲ್ಲಿರುವುದು ಡಬಲ್‌ ಎಂಜಿನ್‌ ಸರ್ಕಾರವಲ್ಲ, ಡಬ್ಬಾ ಸರ್ಕಾರ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆ. ಆದರೆ, ಎಲ್ಲ ನಿರೀಕ್ಷೆಗಳು ಹುಸಿಯಾಗಿವೆ. ಆರ್‌ಎಸ್‌ಎಸ್‌ ಹಿನ್ನೆಲೆಯವರು ಯಾರಾದರೂ ಇಂಥಾ ಬಜೆಟ್ ಮಂಡಿಸಿದ್ದರೆ ನನಗೇನೂ ಬೇಸರ ಆಗುತ್ತಾ ಇರಲಿಲ್ಲ. 2008ರ ವರೆಗೆ ಆರ್‌ಎಸ್‌ಎಸ್‌, ಬಿಜೆಪಿ ಸಂಪರ್ಕವೇ ಹೊಂದಿರದ ಬೊಮ್ಮಾಯಿ ಇಂಥಾ ಬಜೆಟ್ ಮಂಡನೆ ಮಾಡುತ್ತಾರೆಂಬ ನಿರೀಕ್ಷೆ ಮಾಡಿರಲಿಲ್ಲ. ಎಸ್.ಆರ್ ಬೊಮ್ಮಾಯಿ ಅವರ ಪ್ರಭಾವ ಮಗನ ಮೇಲಿದೆ ಎಂದು ನಂಬಿದ್ದೆ. ಆದರೆ, ತಂದೆಯ ಪ್ರಭಾವಕ್ಕಿಂತ ಆರ್‌ಎಸ್‌ಎಸ್‌ ಪ್ರಭಾವವೇ ಹೆಚ್ಚು ಬೀರಿದಂತೆ ಇದೆ’ ಎಂದರು.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *